ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ: ಪ್ರಿಯಾಂಕ್ ಖರ್ಗೆ ರಾಜಿನಾಮೆಗೆ ಬಿಜೆಪಿ ಒತ್ತಾಯ

ಹೊಸದಿಗಂತ ಮಂಡ್ಯ :

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗರು ಕಲುಬುರ್ಗಿಯ ಚಿತ್ತಾಪುರದ ಅತಿಥಿಗೃಹದಲ್ಲಿ ದಿಗ್ಭಂಧನದಲ್ಲಿಟ್ಟು, ಅವರ ಕಾರಿನ ಮೇಲೆ ಬಣ್ಣ ಎರಚುವ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ. ತಕ್ಷಣ ಸಚಿವ ಪ್ರಿಯಾಂಕ ಖರ್ಗೆಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್ ಒತ್ತಾಯಿಸಿದರು.

ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಅಥವಾ ರಿಪಬ್ಲಿಕ್ ಆಫ್ ಕಲುಬುರ್ಗಿ-ಅಖೋಷಿತ ತುರ್ತು ಪರಿಸ್ಥಿತಿಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆಯೋ ಎಂದು ಅನುಮಾನ ವ್ಯಕ್ತಪಡಿಸಿದರು.

ಕಲುಬುರ್ಗಿಯಲ್ಲಿ ನಡೆದ ಭಟನೆ ಭಯಾನಕವಾಗಿದೆ. ಪೊಲೀಸರ ನಿಷ್ಠೆ ಯಾರ ಕಡೆಗೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಸಂವಿಧಾನಬದ್ಧವಾಗಿ ಕಾನೂನು ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶವನ್ನು ಅವರ ಎಜೆಂಟರಂತೆ ವರ್ತಿಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ದೂರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!