ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೇಂದ್ರ ಕಾರಾಗೃಹ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು. ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಮಂಡ್ಯದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ.
ಹೇಳಿದ ಕೆಲಸ ಮಾಡದಿದ್ದರೆ ಸಜಾ ಕೈದಿಗಳು ವಿಚಾರಣಾ ಕೈದಿಗಳು ಮೇಲೆ ಇಲ್ಲ-ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಜೈಲು ಸಿಬ್ಬಂದಿಗೆ ಸುಳ್ಳು ಹೇಳಿ, ವಿಚಾರಣಾ ಕೈದಿಗೆ ಹಲ್ಲೆ ಮಾಡುವಂತೆ ಹಲ್ಲೆ ಮಾಡುವಂತೆ ಪ್ರವೋಕ್ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.