ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮೀಕ್ಷೆ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಮಿತಿಯು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಪ್ರತಿಭಟನೆಗೆ ಅವಕಾಶ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜತೆಗೆ, 1 ಲಕ್ಷ ರೂಪಾಯಿ ಬಾಂಡ್ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದೆ.
ಮಧ್ಯಾಹ್ನ 3:30ರ ಬಳಿಕ ಪ್ರತಿಭಟನೆಗೆ ಅವಕಾಶ ನೀಡಲು ಸೂಚನೆ ನೀಡಿ, ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ದೇವದಾಸ್ ಅವರಿದ್ದ ಪೀಠ ಅವರಿದ್ದ ಪೀಠ ಸೂಚನೆ ನೀಡಿದೆ.
ಮೈಸೂರಿ ಫುಟ್ಬಾಲ್ ಮೈದಾನದಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರತಿಭಟನೆ ಶಾಂತಿಯುತವಾಗಿರಬೇಕು. ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಕಸ್ಮಾತ್ ಅಹಿತಕರ ಘಟನೆ ನಡೆದರೆ ಅರ್ಜಿದಾರರೇ ಹೊಣೆ ಎಂದು ಹೈಕೋರ್ಟ್ ಇದೆ ವೇಳೆ ತಿಳಿಸಿತು.
ಮತ್ತೊಂದೆಡೆ ಈಗಾಗಲೇ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿ ಜಾಥಾ ಹಮ್ಮಿಕೊಂಡಿದ್ದು ಜಾಥಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಲಿದ್ದಾರೆ. ಇತ್ತ ಇದನ್ನು ವಿರೋಧಿಸಿ ಅದೇ ಸಮಯದಲ್ಲಿ ದಲಿತ ಮಹಾಸಭಾ ಮೌನ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲು ಮುಂದಾಗಿದೆ.