ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಆರು ಬಾರಿ ಚಾಕುವಿನಿಂದ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಪಿ ದೀಕ್ಷಿತ್ ಗೆಡಮ್, ಸೈಫ್ ಅಲಿಖಾನ್ ಮನೆಯಲ್ಲಿ ನಡೆದ ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ ಎಂದರು.
ಈ ಆರೋಪಿ ಬಾಂಗ್ಲಾದೇಶದವನಾಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿದೆ. ಅವನ ಬಳಿ ಯಾವುದೇ ಭಾರತೀಯ ದಾಖಲೆಗಳಿಲ್ಲ. ಅವನು ಬಾಂಗ್ಲಾದೇಶದವನೆಂದು ನಾವು ಶಂಕಿಸಿದ್ದೇವೆ, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.