July 31, 2026
Friday, July 31, 2026
spot_img

ಕುಂದಾಪುರದಲ್ಲಿ ನೆತ್ತರು ಹರಿಸಿದ ಹಂತಕರು: ಬಾರ್ಕೂರಿನ ವ್ಯಕ್ತಿಯನ್ನು ಗುಂಡಿಕ್ಕಿ ಭೀಕರ ಕೊ*ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಭೀಕರ ಅಪರಾಧ ಕೃತ್ಯವೊಂದು ಸಂಭವಿಸಿದೆ. 45 ವರ್ಷದ ವ್ಯಕ್ತಿಯೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಅಟ್ಟಾಡಿಸಿ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ದುರ್ದೈವಿಯನ್ನು ಬಾರ್ಕೂರಿನ ಕಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನ್ಹಸ್ (45) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಪ್ರಾಥಮಿಕ ವರದಿಗಳ ಪ್ರಕಾರ, ಐವನ್ ರಿಚರ್ಡ್ ಅವರ ಮೇಲೆ ಹೊಂಚು ಹಾಕಿ ಬಂದಿದ್ದ ಅಪರಿಚಿತ ಹಂತಕರ ತಂಡವು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ತಕ್ಷಣ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:

ಪೊಲೀಸ್ ತನಿಖೆ ಚುರುಕು:

ಈ ಭೀಕರ ಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಹಳೆಯ ವೈಷಮ್ಯ ಅಥವಾ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆಯೇ ಎಂಬ ದೂರಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದ್ದಾರೆ. ಘಟನೆಯಿಂದಾಗಿ ಕುಂದಾಪುರ ಹಾಗೂ ಬಾರ್ಕೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !