ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಿಂದ ಇರಾನ್ ಮೇಲೆ ವೈಮಾನಿಕ ದಾಳಿ ಸಂಭವಿಸಬಹುದೆಂಬ ಆತಂಕದ ಹಿನ್ನೆಲೆ, ಅಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ಮುನ್ನೆಚ್ಚರಿಕೆ ಸೂಚಿಸಿದೆ. ಸಾಧ್ಯವಾದಷ್ಟು ಬೇಗ ವಾಣಿಜ್ಯ ವಿಮಾನಗಳ ಮೂಲಕ ಇರಾನ್ ತೊರೆಯುವಂತೆ ರಾಯಭಾರ ಕಚೇರಿ ಮನವಿ ಮಾಡಿದೆ.
ಈ ಸೂಚನೆ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಸೇರಿದಂತೆ ಎಲ್ಲಾ ಭಾರತೀಯರಿಗೆ ಅನ್ವಯವಾಗಲಿದೆ. ಜನವರಿ 14, 2026ರಂದು ಹೊರಡಿಸಿದ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಪ್ರತಿಭಟನೆಗಳು ನಡೆಯುವ ಪ್ರದೇಶಗಳಿಗೆ ಹೋಗದಿರಲು ಹಾಗೂ ಸ್ಥಳೀಯ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ.
ಇದನ್ನೂ ಓದಿ:
ಇರಾನ್‌ನಲ್ಲಿರುವವರು ತಮ್ಮ ಪಾಸ್‌ಪೋರ್ಟ್ ಮತ್ತು ಇತರೆ ಗುರುತಿನ ದಾಖಲೆಗಳನ್ನು ಸದಾ ಕೈಯಲ್ಲಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ ರಾಯಭಾರ ಕಚೇರಿಯ ದೂರವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಭಾರತೀಯರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



