April 9, 2026
Thursday, April 9, 2026
spot_img

ಕೇರಳ ಆರೋಗ್ಯ ಸಚಿವೆಗೆ ಮುತ್ತಿಗೆ ಹಾಕಲು ಯತ್ನ: ವೀಣಾ ಜಾರ್ಜ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಮೇಲೆ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ಕಣ್ಣೂರು ರೈಲು ನಿಲ್ದಾಣದಲ್ಲಿ ಬುಧವಾರ ನಡೆದಿದೆ .

ಆಲಪ್ಪುಳದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ವಿವಾದದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಲೋಪಗಳ ಕುರಿತು ಸಚಿವರ ವಿರುದ್ಧ ಕೇರಳದ ಕಾಂಗ್ರೆಸ್ ವಿದ್ಯಾರ್ಥಿ ಸಂಘ (KSU) ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಚಿವೆ ಜಾರ್ಜ್ ರೈಲು ಹತ್ತಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವೇಳೆ ಘಟನೆ ಸಂಭವಿಸಿದೆ.

ಪೊಲೀಸ್ ಸಿಬ್ಬಂದಿಗಳು ಅವರನ್ನು ನಿಲ್ದಾಣದ ಮೂಲಕ ಕರೆದೊಯ್ಯಲು ಪ್ರಯತ್ನಿಸುತ್ತಿರುವಾಗ ಪ್ರತಿಭಟನಾಕಾರರ ಗುಂಪಿನ ನಡುವೆ ಸಚಿವೆ ಸಿಕ್ಕಿಬಿಬಿದ್ದರು. ಇದರಿಂದಾಗಿ ತಳ್ಳಾಟ–ನುಗ್ಗಾಟ ಉಂಟಾಗಿದೆ ಎಂದು ತಿಳಿದುಬಂದಿದೆ. ಈ ಗೊಂದಲದ ನಡುವೆ ಸಚಿವೆ ಅವರ ಕುತ್ತಿಗೆ ಹಾಗೂ ಕೈಗೆ ಗಾಯವಾಗಿದ್ದು, ಕಣ್ಣೂರಿನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಈ ಘಟನೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ಆರೋಗ್ಯ ಸಚಿವರ ಮೇಲೆ ನಡೆದ ದಾಳಿ ಮಹಿಳೆಯ ಮೇಲಿನ ಹಲ್ಲೆ. ಇಂತಹ ಕ್ರಮಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯನ್ನುಂಟುಮಾಡುತ್ತವೆ ಎಂದು ಹೇಳಿದ್ದಾರೆ.

ಆಲಪ್ಪುಳದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ಐದು ವರ್ಷಗಳ ನಂತರ ಮಹಿಳೆಯ ಹೊಟ್ಟೆಯೊಳಗೆ ಶಸ್ತ್ರಚಿಕಿತ್ಸೆ ಮಾಡುವ ಕತ್ತರಿ ಪತ್ತೆಯಾಗಿದೆ ಎಂಬ ವಿಚಾರ ತಿಳಿದು ಬಂದ ನಂತರ ವಿವಾದ ತೀವ್ರಗೊಂಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !