ಹೊಸದಿಗಂತ ವರದಿ,ಹಾಸನ:
ಜಿಲ್ಲೆಯನ್ನು ಸಂಪೂರ್ಣ ಬರಪೀಡಿತವೆಂದು ಘೋಷಣೆ ಮಾಡಿಲ್ಲ ಎಂದು ಆರೋಪಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ಸಭೆ ನಿಮಿತ್ತ ಹಾಸನಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸುತ್ತಿದ್ದ ವೇಳೆ ಹಾಸನ್ ಜಿಲ್ಲಾ ಪಂಚಾಯಿತಿ ಎದುರೇ ಕರವೇ ಕಾರ್ಯಕರ್ತರು ಗೆರಾವ್ ಹಾಕಲು ಯತ್ನಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಜಿಲ್ಲಾಧ್ಯಕ್ಷ ಮನುಕುಮಾರ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆಯಿತು. ಸುಮಾರು 15 ಜನರ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದರು.
ಪರಿಸ್ಥಿತಿ ಅರಿತ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದರು, ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಮನು ಕುಮಾರ್ ಮಾತನಾಡಿ ಹಾಸನ ಜಿಲ್ಲೆಯನ್ನು ಉಸ್ತುವಾರಿ ಸಚಿವ ಕೆ.ಏನ್ ರಾಜಣ್ಣ ಕಡೆಗಣಿಸಿದ್ದಾರೆ, ಹಾಸನ ಜಿಲ್ಲೆಯಲ್ಲಿ ಬರದ ಛಾಯೆ ಆಚರಿಸಿದ್ದು ಈ ವೇಳೆ ಯಾವುದೇ ಸಭೆ ಸಮಾರಂಭ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಕಳೆದ ಎರಡು ತಿಂಗಳಿಂದ ಹಾಸನ ಜಿಲ್ಲೆಗೆ ಬರಾದ ಉಸ್ತುವಾರಿ ಸಚಿವರ ನಡೆ ಖಂಡನೀಯ, ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳು ಇದ್ದರು ಅವುಗಳ ನಿವಾರಣೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಹೇಮಾವತಿ ಒಡಲು ಬರಿದಾಗುತ್ತಿರುವ ಸಮಯದಲ್ಲಿ ಕೂಡ ಬಾರದ ಸಚಿವ ಕೆ. ಏನ್ ರಾಜಣ್ಣ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.