Thursday, December 11, 2025

2A ಮೀಸಲಾತಿಗೆ ಆಗ್ರಹಿಸಿ ಸುವರ್ಣ ಸೌಧ ಮುತ್ತಿಗೆಗೆ ಯತ್ನ: ಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್;

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಲಿಂಗಾಯತ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ನಗರದ ಸಂಗೊಳ್ಳಿ‌ ರಾಯಣ್ಣ ವೃತ್ತದಲ್ಲಿ ವಶಕ್ಕೆ ಪಡೆದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಕಳೆದ ವರ್ಷ ಡಿಸೆಂಬರ್​ 10 ರಂದು ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ನಗರದ ಗಾಂಧಿ ಭವನದಿಂದ ಸುವರ್ಣ ವಿಧಾನಸೌಧವರೆಗೆ ಮೌನ ಪ್ರತಿಭಟನಾ ರ‍್ಯಾಲಿ ಉದ್ದೇಶಿಸಲಾಗಿತ್ತು. ಈ ವೇಳೆ ಕೂಡಲಸಂಗಮ ಪಂಚಮಸಾಲಿ‌ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ‌.ಸಿ‌‌. ಪಾಟೀಲ್, ಅರವಿಂದ ಬೆಲ್ಲದ, ಸಿದ್ದು ಸವದಿ, ಮಾಜಿ ಶಾಸಕ ಡಾ‌. ವಿಶ್ವನಾಥ ಪಾಟೀಲ ಸೇರಿ ಅನೇಕರು ಭಾಗಿಯಾಗಿದ್ದರು.

ಈ ವೇಳೆ ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಂಚಮಸಾಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

error: Content is protected !!