ಹಾವೇರಿ ಪ್ರಕರಣ ಮುಚ್ಚಿ ಹಾಕಲು ಯತ್ನ: ಬಿ.ವೈ.ವಿಜಯೇಂದ್ರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಅವರು, ಪೊಲೀಸರು ರಾಜ್ಯ ಸರ್ಕಾರದ ಕೈಗೊಂಬೆಯಾಗಿದ್ದಾರೆ.ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವ ಕೆಲಸದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಿಡಿಕಾರಿದರು.

ನೀಚ ಘಟನೆ ನಡೆದಿದೆ. ಈ ವಿಚಾರದಲ್ಲಿಯೂ ರಾಜಕೀಯ ಮಡಬಾರದು. ಈ ಪ್ರಕರಣವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಎಂದರೆ ಈ ಸರ್ಕಾರ ಯಾಕೆ ಬೇಕು? ಎಂದು ಪ್ರಸ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!