ವಿಧಾನಸೌಧದ ಬಳಿ ಡ್ರೋನ್ ಹಾರಿಸಲು ಯತ್ನ: ಇಬ್ಬರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸೌಧದ ಬಳಿ ಡ್ರೋನ್ ಹಾರಿಸಲು ಯತ್ನಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ನಿರ್ಬಂಧವಿದ್ದರೂ ಖಾಸಗಿ ಕಂಪನಿಯ ಇಬ್ಬರು ನೌಕರು ಡ್ರೋನ್ ಹಾರಿಸಲು ಯತ್ನಿಸಿದ್ದಾರೆ. ಇಬ್ಬರು ವ್ಯಕ್ತಿಗಳ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಖಾಸಗಿ ಕಂಪನಿಯ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ಬಳಿ ವಿಡಿಯೋ ಚಿತ್ರೀಕರಣ ಮಾಡಲು ಇಬ್ಬರು ಯುವಕರು ಬಂದಿದ್ದರು. ಕೂಡಲೇ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!