400 ಜನರ ಬಲವಂತದ ಮತಾಂತರಕ್ಕೆ ಯತ್ನ: 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರಿಯ ಪೊಲೀಸ್ ಅಧೀಕ್ಷಕರನ್ನು (ಎಸ್‌ಎಸ್‌ಪಿ) ಸಂಪರ್ಕಿಸಿದ ಸಂತ್ರಸ್ತರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ದೂರಿದ್ದಾರೆ. ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಲೀಸ್ ದೂರಿನಲ್ಲಿ, ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಲಾಯಿತು ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಎಫ್‌ಐಆರ್‌ನ ಪ್ರಕಾರ, ಅಕ್ರಮವಾಗಿ ಮತಾಂತರಗೊಳ್ಳಲು ಜನರನ್ನು ಒತ್ತಾಯಿಸಿದ ಆರೋಪಿಗಳು ಕೋವಿಡ್ -19 ಪ್ರೇರಿತ ಸಾಂಕ್ರಾಮಿಕ ಸಮಯದಲ್ಲಿ ಸಂತ್ರಸ್ತರೊಂದಿಗೆ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ.

“ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಯಿತು ಮತ್ತು ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸುವಂತೆ ಕೇಳಲಾಯಿತು, ದೀಪಾವಳಿಯ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ನೀವು ನಿಮ್ಮ ಧರ್ಮವನ್ನು ಪರಿವರ್ತಿಸುತ್ತಿರುವಾಗ ಯಾಕೆ ಹೀಗೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ನಾವು ಇದನ್ನು ವಿರೋಧಿಸಿದಾಗ ಅವರು ನಮಗೆ ಜೀವ ಬೆದರಿಕೆ ಹಾಕಿದರು” ಎಂದು ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿದ ನಂತರ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!