ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಸೀದಿಯೊಂದರಲ್ಲಿ ಮೌಲ್ವಿಯಿಂದ 5 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಎರಡು ವರ್ಷದ ಬಳಿಕ ಬೆಳಕಿಗೆ ಬಂದಿದೆ.
2023ರ ಅಕ್ಟೋಬರ್ 5 ರಂದು ಅಪ್ರಾಪ್ತ ಬಾಲಕಿ ಮೇಲೆ ಮೌಲ್ವಿ ತುಫೇಲ್ ಅಹ್ಮದ್ ದಾದಾಫೀರ್ ಅತ್ಯಾಚಾರಕ್ಕೆ ಯತ್ನಿಸಿದ್ದು,. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್ (22) ಎಂಬಾತನನ್ನು ಮುರಗೋಡ ಪೊಲೀಸರು ಬಂಧಿಸಿ, ಹಿಂಡಲಗಾ ಜೈಲಿಗಟ್ಟಿದ್ದಾರೆ.ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, ಮಂಗಳವಾರ (ಆ.05) ಸಂಜೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಒಂದು ಪೋಸ್ಟ್ ಮಾಡಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಮಾತನಾಡಿದ ಆಡಿಯೋ ಮತ್ತು ವಿಡಿಯೋ ತುಣುಕು ಇತ್ತು. ಇದರಲ್ಲಿ ಬಾಲಕಿ ಮೇಲೆ ಓರ್ವ ವ್ಯಕ್ತಿ ಮಲಗುವ ರೀತಿಯಲ್ಲಿತ್ತು ಎಂದು ಹೇಳಿದರು.
ಕೂಡಲೇ ನಮ್ಮ ಸಿಇಎನ್ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಡಿಯೋದಲ್ಲಿನ ವಿಳಾಸ ಆಧರಿಸಿ ತನಿಖೆ ಶುರು ಮಾಡಿದ್ದರು. ಕೂಡಲೇ ನಮ್ಮ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಈ ಘಟನೆ 2023ರ ಅಕ್ಟೋಬರ್ 5ರಂದು ನಡೆದಿದೆ. ಮಸೀದಿ ಪಕ್ಕದ ಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ ಎಂದರು.