ಮಾದಕ ವಸ್ತು ಮಾರಾಟ ಯತ್ನ: ಓರ್ವನ ಬಂಧನ‌

ಹೊಸದಿಗಂತ ವರದಿ ಮಡಿಕೇರಿ:

ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ನಿವಾಸಿ ಎಂ.ಹೆಚ್.ಸಯ್ಯದ್ ಹುಸೇನ್(27) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ 3.06 ಗ್ರಾಂ (ಎಂ.ಡಿ.ಎಂ.ಎ) ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳ ಕುರಿತು ಪೊಲೀಸ್ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಸೈಬರ್ ಕ್ರೈಂ (ಸೆನ್) ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಕೆ.ರಾಘವೇಂದ್ರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಎಂ.ಡಿ.ಎಂ.ಎ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಈ ತಂಡಕ್ಕೆ ಲಭಿಸಿತ್ತು. ಅದರಂತೆ ದಾಳಿ ನಡೆಸಿ ಪರಿಶೀಲಿಸಿದಾಗ ಆರೋಪಿ ಬಳಿ ಮಾದಕ ವಸ್ತು ಪತ್ತೆಯಾಗಿದೆ.
ಸ್ಥಳದಲ್ಲೇ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!