ಹೊಸದಿಗಂತ ಡಿಜಿಟಲ್ ಡೆಸ್ಕ್:
ಕದ್ದ ಕಾರುಗಳ ನಂಬರ್ ಪ್ಲೇಟ್ ಬದಲಾಯಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ.
ಜೆಡಿಎಸ್ ಎಂಎಲ್‌ಸಿ ಭೋಜೇಗೌಡ ಅವರ ಕಾರಿನ ನಂಬರ್‌ನ್ನು, ಕದ್ದ ಕಾರ್ ಒಂದಕ್ಕೆ ಹಾಕಿ ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಷ್ಟಿತ ಕಾರ್ ಶೋ ರೂಂ ಒಂದರಲ್ಲಿ ಕಾರ್ ಮೇಲೆ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಕಾಣಿಸಿದ್ದು, ಕಾರ್ ಶೋ ರೂಂ ಮಾಲೀಕ ಶಹಬಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶೋ ರೂಂ ಎದುರು ಕಾರ್ ನಿಲ್ಲಿಸಿದ್ದು, ಭೋಜೇಗೌಡ ಅವರ ಪಿಎ ಮಾದೇಶ್ ಕಾರ್‌ನ್ನು ಗಮನಿಸಿದ್ದಾರೆ. ಇದನ್ನು ನೋಡಿ ಶಾಕ್ ಆಗಿ, ಕಾರ್ ಶೋ ರೂಂ ಒಳಗೆ ಹೋಗಿ ವಿಚಾರಿಸಿದ್ದಾರೆ. ಕಾರು ಮಾರಾಟಕ್ಕೆ ಇದೆ ಎಂದು ತಿಳಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದು, ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.