ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ನುಸುಳುಕೋರರನ್ನು ಹತ್ಯೆ ಮಾಡಿರುವುದಾಗಿ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎರಡು ಎಕೆ ರೈಫಲ್ಸ್, ನಾಲ್ಕು ಮ್ಯಾಗಜಿನ್, 90 ಗುಂಡು, ಒಂದು ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕುಪ್ವಾರ ಪೊಲೀಸ್ ಅಧಿಕಾರಿಗಳು, ಕುಮ್ಕಾಡಿ ಏರಿಯಾದ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ನುಸುಳುಕೋರರು ಒಳ ನುಗ್ಗುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭಿಸಿತ್ತು. ಈ ಸಂಬಂಧ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಡಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.