ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಸಮೀಪ ಗಡಿಯೊಳಗೆ ನುಸುಳುವ ಯತ್ನಿಸಿದ ಐವರು ಲಷ್ಕರ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ನಡೆದಿದೆ.
ಕುಪ್ವಾರಾ ಜಿಲ್ಲೆಯ ಮಚಿಲ್ ವಲಯದಲ್ಲಿ ಗುರುವಾರ ಆರಂಭದಲ್ಲಿ ನಡೆದ ಶೂಟೌಟ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಮುಂದುವರಿದ ಗುಂಡಿನ ಚಕಮಕಿಯಲ್ಲಿ ಮತ್ತೆ ಮೂವರು ಉಗ್ರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
. ಹತ್ಯೆಯಾದ ಉಗ್ರರು ಲಷ್ಕರ್ ಎ ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್‌ಒಸಿಯ ಉದ್ದಕ್ಕೂ ಇನ್ನೂ 16 ಭಯೋತ್ಪಾದನಾ ಲಾಂಚಿಂಗ್ ಪ್ಯಾಡ್‌ಗಳು ಸಕ್ರಿಯವಾಗಿವೆ. ಪಾಕಿಸ್ತಾನದಿಂದ ಇನ್ನಷ್ಟು ಉಗ್ರರನ್ನು ಒಳಗೆ ಕಳುಹಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪ್ರಧಾನ ನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.