ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿಲ್ಲಿಯ ಬುಲಂದ್ ಶಹರ್ ನಲ್ಲಿ ಪೈಶಾಚಿಕ ರೀತಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ದಾಳಿಗೆ ಯತ್ನ ನಡೆದಿದೆ.
ಪೋಲಿಗ್ರಾಫ್ ಪರೀಕ್ಷೆಯ ನಂತರ ಆರೋಪಿಯನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.
ದಿಲ್ಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆಗಂತುಕರಿಬ್ಬರು ತಲವಾರಿ ಹಿಡಿದು ದಾಳಿಗೆ ಯತ್ನಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ತಕ್ಷಣ ಅಲಟ್೯ ಆದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ. ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮಾರಕಾಯುಧ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.