ದಿಗಂತ ವರದಿ ಕಲಬುರಗಿ:
ಶಿಕ್ಷಕನಿಂದಲೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ವ್ಯಕ್ತವಾಗಿದ್ದು, ಈ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಆಳಂದ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ ಎಂಬಾತನಿಂದ ವಿಧ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ.
ಐದನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿಯನ್ನು ಶಾಲೆಯ ಅವಧಿ ಮುಗಿದ ಬಳಿಕ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ ಎಂದು ನಿಂಬರಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.