ಹೊಸದಿಗಂತ ವರದಿ,ಬೆಳಗಾವಿ:
ಅಪ್ರಾಪ್ತೆ ಬುದ್ಧಿಮಾಂದ್ಯ ಯುವತಿಯ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ, ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣವಾಗಿದೆ.
ಬೆಳಗಾವಿ ತಾಲೂಕಿನ ಗ್ರಾಮವೊಂದರ ಸಮೀರ್ ಅಬ್ಬಾಸ್ ಧಾಮಣೆಕರ (30) ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯಾಗಿದ್ದು, ಗ್ರಾಮಸ್ಥರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವತಿ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಯುವತಿ ಕಿರುಚಾಡಿದ್ಜರಿಂದ ಓಣಿಯಲ್ಲಿದ್ದ ಅಕ್ಕಪಕ್ಕದವರು ಆರೋಪಿ ಸಮೀರಾ ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಡಿಸಿಪಿ ಸ್ನೇಹಾ ಪಿ.ವಿ ಹಾಗೂ ಸಿಬ್ಬಂದಿ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.