ನೆಲಮಂಗಲದಲ್ಲಿ ದರೋಡೆ ಯತ್ನ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಫೈರಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿ ಮಾಲೀಕನ ಮೇಲೆ ದರೋಡೆಕೋರರ ಗ್ಯಾಂಗ್​​ ಫೈರಿಂಗ್ ನಡೆಸಿ, ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ. ಘಟನೆಯ ವಿವರ: ಡಾಬಸ್‌ಪೇಟೆಯ ಪ್ರಮುಖ ರಸ್ತೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲ್ಲರಿ ಶಾಪ್‌ಗೆ ಅಪರಿಚಿತ ದುಷ್ಕರ್ಮಿಗಳು ಗ್ರಾಹಕರ ಸೋಗಿನಲ್ಲಿ ಒಳಪ್ರವೇಶಿಸಿದ್ದಾರೆ. ಒಳಗೆ ಬಂದ ತಕ್ಷಣ ಚಿನ್ನಾಭರಣಗಳನ್ನು ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಜ್ಯುವೆಲ್ಲರಿ ಶಾಪ್ ಮಾಲೀಕ ಪುನ್ನಾರಾಮ್ ದರೋಡೆಕೋರರನ್ನು ತಡೆಯಲು ಮುಂದಾಗಿದ್ದಾರೆ. … Continue reading ನೆಲಮಂಗಲದಲ್ಲಿ ದರೋಡೆ ಯತ್ನ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಫೈರಿಂಗ್