ಅಪ್ರಾಪ್ತ ಹೆಣ್ಣುಮಕ್ಕಳ ಮಾರಾಟಕ್ಕೆ ಯತ್ನ: ಮಹಿಳೆ ಮತ್ತು ಆಕೆಯ ಪ್ರಿಯಕರ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೂವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿರುವ ಆರೋಪದ ಮೇಲೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 42 ವರ್ಷದ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂವರು ಹುಡುಗಿಯರು 12, 14 ಮತ್ತು 16 ವರ್ಷ ವಯಸ್ಸಿನವರು ಎನ್ನಲಾಗಿದೆ.

ಮಾರಾಟವಾಗಿ ಸೆರೆಯಲ್ಲಿದ್ದ ಹೆಣ್ಣು ಮಕ್ಕಳು ಸೆರೆಯಿಂದ ಪರಾರಿಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಹುಡುಗಿಯರು ತಮ್ಮ ತಾಯಿಯ ಅಜ್ಜನ ಬಳಿಗೆ ತೆರಳಿ ಅಲ್ಲಿಂದ ಮಾರಾಟ ಮಾಡಿರುವ ಕುರಿತು ಪೋಲೀಸರಿಗೆ ತಿಳಿಸಿದ್ದಾರೆ.

ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ ಹುಡುಗಿಯರನ್ನು ಖರೀದಿಸಿದ ಮೂವರು ಪುರುಷರ ಮೇಲೂ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣದ ಎಲ್ಲಾ ಐವರು ಆರೋಪಿಗಳು ಪ್ರಸ್ತುತ ಪೊಲೀಸರಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇಬ್ಬರು ಹಿರಿಯ ಹೆಣ್ಣು ಮಕ್ಕಳನ್ನು ರಾಜಸ್ಥಾನದ ನಿವಾಸಿಗಳಿಗೆ ತಲಾ 4 ಲಕ್ಷ ರೂ.ಗೆ ದಂಪತಿ ಮಾರಾಟ ಮಾಡಿದ್ದಾರೆ ಎಂದು ಮಹಿದ್‌ಪುರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಆರ್‌ಕೆ ರೈ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ನಂತರ ಅವರು 12 ವರ್ಷದ ಕಿರಿಯ ಮಗುವನ್ನು 1.75 ಲಕ್ಷ ರೂ.ಗೆ ರಾಜಸ್ಥಾನದ ಇನ್ನೊಬ್ಬ ವ್ಯಕ್ತಿಗೆ ಮಾರಾಟ ಮಾಡಿ ಮದುವೆ ಮಾಡಿದ್ದಾರೆ.

ಪ್ರಕರಣದ ಎಲ್ಲಾ ಐವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 370 (ಮಾನವ ಕಳ್ಳಸಾಗಣೆ), 376 (ಗ್ಯಾಂಗ್ ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!