ನಕ್ಷತ್ರ ಆಮೆ ಮಾರಾಟ ಯತ್ನ: ಓರ್ವನ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಅಳಿವಿನ ಅಂಚಿನಲ್ಲಿರುವ ಜೀವಂತ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಯಾಸಿನ್ ಪಾಷಾ ಎಂಬಾತನೇ ಬಂಧಿತ ಆರೋಪಿ.
ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯಿಂದ ಸುದರ್ಶನ ಅತಿಥಿ ಗೃಹಕ್ಕೆ ತೆರಳುವ ಮಾರ್ಗದಲ್ಲಿ ಓರ್ವ ವ್ಯಕ್ತಿ ಜೀವಂತ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕಕ್ಕೆ ಮಾಹಿತಿ ಲಭಿಸಿತ್ತು. ಈ ಸುಳಿವು ಅರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಆಮೆಯ ಸಹಿತ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‍ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ ಹೆಡ್‍ಕಾನ್ಸ್ಟೇಬಲ್‍ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್‌ಟೇಬಲ್ ಸ್ವಾಮಿ, ಮಂಜುನಾಥ ಅವರುಗಳು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!