ಮೆಟ್ರೋ ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನ: ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ವ್ಯಕ್ತಿಯೊಬ್ಬ ಯತ್ನಿಸಿದ್ದು, ಇದರಿಂದ ಕೆಲ ಕಾಲ ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳಿಸಿರುವಂತ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕಾರಣದಿಂದ ಕೆಲ ಕಾಲ ರೈಲು ಹಳಿಗಳ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದರಿಂದ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಮೆಟ್ರೋ ವಿಳಂಬದಿಂದಾಗಿ ಪರದಾಡುವಂತೆ ಆಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!