ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯುವಕನೊಬ್ಬ ಯತ್ನಿಸಿರುವ ಘಟನೆ ಬೆಂಗಳೂರು ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಯುವಕನನ್ನು ಬಿಹಾರ (Bihar) ಮೂಲದ 20 ವರ್ಷದ ಶ್ರೀ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ಇಂದು (ಸೆ.17) ಮಧ್ಯಾಹ್ನ 2:15ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಬರುತ್ತಿದ್ದ ಮೆಟ್ರೋ ರೈಲಿನ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ (ETS) ನಿರ್ವಹಿಸಿ, ಸ್ಟೇಷನ್ ಕಂಟ್ರೋಲರ್ ತಂಡದಿಂದ ಯುವಕನನ್ನು ರಕ್ಷಣೆ ಮಾಡಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯುವಕ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.