Thursday, March 30, 2023

Latest Posts

ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದ್ದಕ್ಕೆ ಪೊಲೀಸರ ಮೇಲೆ ಕಾರು ಹರಿಸಲು ಯತ್ನ : ವ್ಯಕ್ತಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಕಾರಿನ ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದ್ದಕ್ಕೆ ಕೋಪಗೊಂಡು ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ನಡೆದಿದೆ.

ಹೋಳಿ ಹಬ್ಬದ ದಿನ ದ್ವಾರಕಾದ ಸೆಕ್ಟರ್‌ – 10ರ ಮಾರುಕಟ್ಟೆ ಪ್ರದೇಶದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ, ಕಾರಿನಲ್ಲಿ ತಂಬಾನೆ ಜೋರಾಗಿ ಹಾಡು ಕೇಳಿಬರುತ್ತಿತ್ತು. ಅದನ್ನು ಗಮನಿಸಿದ ಪೊಲೀಸ್‌ ಸಿಬ್ಬಂದಿ ವಾಲ್ಯೂಮ್‌ ಕಡಿಮೆ ಮಾಡುವಂತೆ ಹೇಳಿದ್ದಾರೆ. ಆದರೆ ಕುಡಿತದ ಅಮಲಿನಲ್ಲಿದ್ದ ಆತ ಪೊಲೀಸರಿಗೆ ಕಾರಿನಿಂದ ಡಿಕ್ಕಿಯನ್ನು ಹೊಡೆಯಲು ಯತ್ನಿಸಿದ್ದಾನೆ.

ಈ ಘಟನೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಜಗದೀಶ್‌ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತದನಂತರ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!