ಬೆಂಗಳೂರಿಗರ ಗಮನಕ್ಕೆ📢: ಮಳೆಯ ಅವಾಂತರಕ್ಕೆ ಅನೇಕ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನದಾದ್ಯಂತ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿದ್ದರೆ, ಇನ್ನು ಅನೇಕ ರಸ್ತೆಗಳಲ್ಲಿ ಮರಗಳು ಬಿದ್ದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿದೆ.

BBMP ಹಾಗೂ ಬೆಂಗಳೂರು ಸಂಚಾರ ಪೊಲೀಸರು ತ್ವರಿತಗತಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರೂ ಅನೇಕ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಮುಂದುವರಿದಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಎಕ್ಸ್​ ನಲ್ಲಿ ಪೋಸ್ಟ್ ಪ್ರಕಟಿಸುವ ಮೂಲಕ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!