ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನದಾದ್ಯಂತ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿದ್ದರೆ, ಇನ್ನು ಅನೇಕ ರಸ್ತೆಗಳಲ್ಲಿ ಮರಗಳು ಬಿದ್ದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿದೆ.
BBMP ಹಾಗೂ ಬೆಂಗಳೂರು ಸಂಚಾರ ಪೊಲೀಸರು ತ್ವರಿತಗತಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರೂ ಅನೇಕ ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಮುಂದುವರಿದಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಪ್ರಕಟಿಸುವ ಮೂಲಕ ಮಾಹಿತಿ ನೀಡಿದ್ದಾರೆ.
“ಸಂಚಾರಸಲಹೆ / Traffic advisory”
ಬಾಳೇಕುಂದ್ರಿ ಜಕ್ಷನ್ ಹತ್ತಿರ ಮರಬಿದ್ದಿರುವುದರಿಂದ ಚಂದ್ರಿಕಾ ಹೊಟೇಲ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಈ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಿದೆ— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 21, 2025