ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಜೈನ ಧರ್ಮದ ಅನುಯಾಯಿಗಳಿಗೆ ಮಹಾವೀರ ಜಯಂತಿ ವಿಶೇಷವಾದ ಹಬ್ಬ. ಚೈತ್ರ ಮಾಸದ ಶುಕ್ಲಪಕ್ಷದ ತ್ರಯೋದಶಿ ದಿನದಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತದೆ. ಮಹಾವೀರ ಜಯಂತಿಯನ್ನು ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ಇರುವ ಜೈನ ಸಮುದಾಯವರು ಆಚರಿಸುತ್ತಾರೆ.