January15, 2026
Thursday, January 15, 2026
spot_img

ಬೆಂಗಳೂರಿಗರ ಗಮನಕ್ಕೆ: ಸಿಲಿಕಾನ್ ಸಿಟಿಯಲ್ಲಿ 3 ದಿನ ಕಾವೇರಿ ನೀರು ಬರಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Most Read

error: Content is protected !!