ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀವು ಬೆಂಗಳೂರಿಗರೇ? ನಿಮಗೆ ಇಡ್ಲಿ-ವಡೆ ಕಾಂಬಿನೇಶನ್ ಅಂದ್ರೆ ಬಹಳ ಇಷ್ಟನಾ? ಹಾಗಾದ್ರೆ ಇಲ್ಲಿ ಕೇಳಿ.. ಇಡ್ಲಿ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಬಂದಿದೆ. ನೀವು ತಿಂತಿರೋ ಇಡ್ಲಿಯಿಂದ ಕ್ಯಾನ್ಸರ್ ಬರುತ್ತೆ ಅನ್ನೋ ಭಯಾನಕ ಸತ್ಯ ಹೊರಬಿದ್ದಿದೆ.
ಪ್ಲಾಸ್ಟಿಕ್ ಹಾಳೆ ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ಕೆಮಿಕಲ್ ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೆ ಆಹಾರ ಇಲಾಖೆ ಬೆಂಗಳೂರಿನ ಹಲವಡೆ ಇಡ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿತ್ತು.
ನಗರದ ವಿವಿಧ ಭಾಗದ ಹೋಟೆಲ್ ಹಾಗೂ ತಿಂಡಿಗಳ ಅಂಗಡಿಗಳಲ್ಲಿ 500ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಲ್ಯಾಬ್ ನಲ್ಲಿ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯಲ್ಲಿ 35 ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಗಳು ತಿನ್ನಲು ಆರೋಗ್ಯಕರವಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಉಳಿದ ನೂರಾರು ಇಡ್ಲಿ ಸ್ಯಾಂಪಲ್ಸ್ ನ ವರದಿಗೆ ಆಹಾರ ಇಲಾಖೆ ಕಾಯುತ್ತಿದೆ.
ಇತ್ತೀಚೆಗೆ ಇಡ್ಲಿಯನ್ನು ಬೇಯಿಸಲು ಪ್ಲಾಸ್ಟಿಕ್ ಹಾಳೆ ಬಳಸುತ್ತಿದ್ದಾರೆ. ಜೊತೆಗೆ ಇಡ್ಲಿ ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರಕಾರ ಪ್ಲಾಸ್ಟಿಕ್ ಬ್ಯಾನ್ ನಂತಹ ಕ್ರಮ ಕೈಗೊಳ್ಳಬೇಕಿದೆ.