ವಾಹನ ಸವಾರರೇ ಗಮನಿಸಿ: HSRP ನಂಬರ್ ಪ್ಲೇಟ್ ಹಾಕಿ ಇಲ್ಲವೇ ದಂಡ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸಾರಿಗೆ ಇಲಾಖೆ ಹೊರಡಿಸುವ ಹೆಚ್ಎಸ್ಆರ್​ಪಿ (HSRP Name Board) ನೇಮ್ ಬೋರ್ಡ್ ಹಾಕಿಸಿಕೊಳ್ಳಲುವಾಹನ ಸವಾರರಿಗೆ ಡೆಡ್ಲೈನ್ ನೀಡಿದೆ. ಫೆ.17 ರಿಂದ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್. ಮೊದಲನೆ ಬಾರಿ ಸಿಕ್ಕಿಬಿದ್ದರೆ ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತೆ ಎಂದಿದೆ.

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ಗಳನ್ನು (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರಿಲ್ಲ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಹೆಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ನಿಗದಿಪಡಿಸಿರುವ ಗಡುವು ಅಂತ್ಯವಾಗಲು ಇನ್ನು 16 ದಿನಗಳಷ್ಟೇ ಬಾಕಿ ಉಳಿದಿವೆ. ಆದರೆ, ಈವರೆಗೆ ಬರೀ 10 ಲಕ್ಷ ವಾಹನಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಆರ್​ಟಿಓ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!