ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆ 1 ತಿಂಗಳು ಬಂದ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಶಾಂತಲಾ ಸರ್ಕಲ್ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ ಒಂದು ತಿಂಗಳು ಬಂದ್ ಆಗಲಿದೆ.
ವೈಟ್ ಟ್ಯಾಪಿಂಗ್ ಕಾಮಗಾರಿ ನ. 19 ರಿಂದ (ಶನಿವಾರ) ಡಿ.18 ರ ವರೆಗೆ ನಡೆಯಲಿದ್ದು, ಹೀಗಾಗಿ ಒಂದು ತಿಂಗಳು ಸಂಚಾರ ಬಂದ್ ಆಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ((BBMP) ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ನಗರದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!