ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣ ಟಿಕೆಟ್ ದರ ಹೆಚ್ಚಳವಾಗಲಿದೆ.
ಈ ಕುರಿತಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕೃತ ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಲೇ ಪರಿಷ್ಕೃತ ದರ ಜಾರಿ ಆಗಲಿದೆ.
ಮೆಟ್ರೋ ರೈಲ್ವೆ 2002ರ ಸೆಕ್ಷನ್ 37ರ ಕಾಯಿದೆಯ ಪ್ರಕಾರ ದರ ಪರಿಷ್ಕರಣೆ ಸಮಿತಿಯು ಮಾಡಿದ ಶಿಫಾರಸುಗಳು ಮೆಟ್ರೋ ರೈಲ್ವೆ ಆಡಳಿತದ ಮೇಲೆ ಬದ್ಧವಾಗಿದೆ. ಅದರಂತೆ, ಬಿ.ಎಂ.ಆರ್.ಸಿ.ಎಲ್ ಆಡಳಿತ ಮಂಡಳಿಯ ಅನುಮೋದನೆಯೊಂದಿಗೆ, ಪರಿಷ್ಕೃತ ದರ ನಾಳೆ ಜಾರಿಗೆ ಬರಲಿದೆ.