ಪ್ರಯಾಣಿಕರ ಗಮನಕ್ಕೆ: ಬೆಂಗಳೂರು ಮಾರ್ಗವಾಗಿ ಸಂಚರಿಸುವ ಈ ರೈಲುಗಳ ಸೇವೆ 2 ದಿನಗಳ ಕಾಲ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 6 ಮತ್ತು 7 ರಂದು ಬೆಂಗಳೂರು-ಹುಬ್ಬಳ್ಳಿ-ಮೈಸೂರು ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ಎರಡು ದಿನಗಳಲ್ಲಿ ಎರಡು ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ.

ಬೆಂಗಳೂರು ವಿಭಾಗದ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಮೈಸೂರು ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಏ. 6ರ ಹುಬ್ಬಳ್ಳಿ-ಬೆಂಗಳೂರು ನಡುವಿನ ವಿಶೇಷ ರೈಲು (07339) ಮತ್ತು ಏ.7 ರಂದು ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವಿಶೇಷ ರೈಲು (07340) ರದ್ದಾಗಿದೆ.

ಏ.7 ಬೆಂಗಳೂರು-ಮೈಸೂರು ಮಾರ್ಗದಲ್ಲಿ ಮೆಮು ವಿಶೇಷ ರೈಲು (06255) ಮತ್ತು ಏ.8ರಂದು ಮೈಸೂರು-ಬೆಂಗಳೂರು ರೈಲು (06560) ಸಂಚಾರ ನಡೆಸುವುದಿಲ್ಲ ಎಂದು ನೈಋತ್ಯ ರೈಲ್ವೆ ಪ್ರಕಟಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!