ಸಿಲಿಕಾನ್ ಸಿಟಿ ಜನರೇ ಗಮನಿಸಿ: ಇಂದಿನಿಂದ ‘ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್’ ರಾತ್ರಿ ಸಂಚಾರ ಬಂದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟ ಫ್ಲೈಓವರ್ ನಲ್ಲಿ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ಸಂಚಾರ ಬಂದ್ ಮಾಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳುವವರೆಗೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ರಾತ್ರಿ 11 ರಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತಿದೆ.

ಈ ಬಗ್ಗೆ ಎನ್ ಹೆಚ್ ಎಐ ಮಾಹಿತಿ ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕಾಮಗಾರಿಯ ಕಾರಣದಿಂದಾಗಿ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಫ್ಲೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ವರೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ವರೆಗೆ ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿರುವುದಾಗಿ ಹೇಳಿದೆ.

ಬೆಳಿಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರವೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ರಾತ್ರಿ 11 ರಿಂದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಎನ್ ಹೆಚ್ ಎ ಐ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!