ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ HAL ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಬದಲಾವಣೆ ಮಾಡಲಾಗಿದೆ.
ಸೆಪ್ಟೆಂಬರ್ 19ರಿಂದ ಸೆಪ್ಟೆಂಬರ್ 26ರವರೆಗೆ ರಿಂಗ್ ರೋಡ್ ನಲ್ಲಿ ಎಲ್ಲಾ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಲೇ ಅರೇಬಿಯಾ, ಬಿರಿಯಾನಿ ಜೋನ್, ಕ್ರೋಮ್ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
https://x.com/DCPTrEastBCP/status/1968316300846887052?ref_src=twsrc%5Etfw%7Ctwcamp%5Etweetembed%7Ctwterm%5E1968316300846887052%7Ctwgr%5Ef5b36250e21d723aa784c398da3a9464a3902659%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbengaluru%2Fvehicle-temporarily-restricted-in-outer-ring-road-to-marathahalli-via-kadubeesanahalli-service-road-from-september-19-to-26-1082006.html
ಪರ್ಯಾಯ ಮಾರ್ಗ
ಮಹದೇವಪುರ ಕಾರ್ತಿಕ್ ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್ ಮೂಲಕ ಮಾರತಹಳ್ಳಿ- ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್ ಪಾಸ್ ಬಳಿ ಯುಟರ್ನ್ ತೆಗೆದುಕೊಳ್ಳಬೇಕು. ಬಳಿಕ ಮಾರತಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯಲ್ಲಿ ಸಂಚರಿಸಬಹುದು.
ದೇವರಬೀಸನಹಳ್ಳಿ ಹಾಗೂ ಬೆಳಂದೂರು ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಡ್ಡಾಯವಾಗಿ ಹೊರ ವರ್ತುಲ ರಸ್ತೆಯ ಮೂಲಕವೇ ಸಂಚರಿಸುವುದು. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಮೇಲ್ಕಂಡ ವಾಹನ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.