May 2, 2026
Saturday, May 2, 2026
spot_img

ಸಿಲಿಕಾನ್ ಸಿಟಿ ಜನತೆ ಗಮನಿಸಿ: ಪೀಣ್ಯ ಫ್ಲೈಓವರ್‌ನಲ್ಲಿ ನಾಲ್ಕು ದಿನ ವಾಹನ ಸಂಚಾರಕ್ಕೆ ನಿರ್ಬಂಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಪೀಣ್ಯ ಮೇಲ್ಸೇತುವೆಯಲ್ಲಿ ‘ಲೋಡ್ ಟೆಸ್ಟಿಂಗ್’ ಮತ್ತು ಸುರಕ್ಷತಾ ಪರಿಶೀಲನೆ ನಡೆಯಲು ಇರುವ ಕಾರಣ ನಾಲ್ಕು ದಿನಗಳ ಕಾಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮೇಲ್ಸೇತುವೆಯಲ್ಲಿ ಮೇ 5 ರ ಮುಂಜಾನೆ 5 ಗಂಟೆಯಿoದ ಮೇ 8 ರ ಬೆಳಗ್ಗೆ 11 ಗಂಟೆಯ ತನಕ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಈ ಸಮಯದಲ್ಲಿ ಬದಲಿ ಮಾರ್ಗ ಬಳಸಲು ಸಂಚಾರ ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲ-ಬೆಂಗಳೂರು ಕಡೆಗೆ ಪ್ರಯಾಣಿಸುವವರು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಮೇಲ್ಸೇತುವೆ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ದಾಸರಹಳ್ಳಿ ಜಾಲಹಳ್ಳಿ ಕ್ರಾಸ್ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಎಸ್‌ಆರ್‌ಎಸ್ ಜಂಕ್ಷನ್ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದು.

ಇನ್ನು ಸಿಎಂಟಿಐ-ನೆಲಮಂಗಲ ಕಡೆಗೆ ತೆರಳುವವರು ಮೇಲ್ಸೇತುವೆ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್ ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಜಾಲಹಳ್ಳಿ ಕ್ರಾಸ್ ದಾಸರಹಳ್ಳಿ 8ನೇ ಮೈಲಿ ಪಾರ್ಲೆ ಜಿ ಟೋಲ್ ಮೂಲಕ ಸಂಚರಿಸಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !