ವಿದ್ಯಾರ್ಥಿಗಳೇ ಗಮನಿಸಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ವೇಳಾಪಟ್ಟಿಯನ್ನುಪ್ರಕಟಿಸಿದೆ. ಅದರಂತೆ ಮೇ.22ರಿಂದ ಪರೀಕ್ಷೆ ಆರಂಭಗೊಂಡು, ಜೂನ್ 2ರಂದು ಮುಕ್ತಾಯಗೊಳ್ಳಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ( Karnataka School Examination and Evaluation Board ) ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಮೇ, ಜೂನ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 22-05-2023ರಿಂದ 02-06-2023ರವರೆಗೆ ನಡೆಸಲು ಮಂಡಳಿಯು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಅಲ್ಲಿಯೂ ವೀಕ್ಷಿಸಬಹುದಾಗಿದೆ ಎಂದಿದ್ದಾರೆ.

ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

22-05-2023, ಸೋಮವಾರ – ಕನ್ನಡ, ಅರೇಬಿಕ್
23-05-2023, ಮಂಗಳವಾರ – ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
24-05-2023, ಬುಧವಾರ – ಇಂಗ್ಲೀಷ್
25-05-2023, ಗುರುವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
26-05-2023, ಶುಕ್ರವಾರ – ಇತಿಹಾಸ, ಸಂಖ್ಯಾಶಾಸ್ತ್ರ
27-05-2023, ಶನಿವಾರ – ಹಿಂದಿ
29-05-2023, ಸೋಮವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
30-05-2023, ಮಂಗಳವಾರ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
31-05-2023, ಬುಧವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ.
01-06-2023, ಗುರುವಾರ – ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
02-06-2023, ಶುಕ್ರವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!