ಪ್ರವಾಸಿಗರೇ ಗಮನಿಸಿ… ಡಿಸೆಂಬರ್ 22 ರಿಂದ 27ರವರೆಗೆ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ (Baba Budan giri) ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ (Chikkamagaluru Tourist spots) ನಿರ್ಬಂಧ ಹೇರಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡಿಸೆಂಬರ್ 22ರಿಂದ 27ರವರೆಗೆ ಪ್ರವಾಸಿ ತಾಣಗಳಿಗೆ ನಿರ್ಬಂಧ ಇರಲಿದೆ.

ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!