ಪ್ರವಾಸಿಗರೇ ಗಮನಿಸಿ…ವರ್ಷದ ಕೊನೆಯಲ್ಲಿ ನಂದಿಬೆಟ್ಟಕ್ಕೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷ ಆಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.

ನಂದಿ ಬೆಟ್ಟ ಒಂದು ಪುರಾನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಗಿರಿಧಾಮವಾಗಿದೆ. ಚಿಕ್ಕಬಳ್ಳಾಪುರ ಪಟ್ಟಣದಿಂದ 10 ಕಿ.ಮಿ ದೂರದಲ್ಲಿ ಹಾಗು ಬೆಂಗಳೂರು ನಗರದಿಂದ ಸುಮಾರು 45 ಕಿ.ಮಿ ದೂರದಲ್ಲಿದೆ. ವೀಕೆಂಡ್ ಬಂದರೆ ಸಾಕು ನಂದಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!