ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಸಿದ್ಧ ಪ್ರವಾಸಿ ತಾಣ ವಿಭೂತಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆಯಿಂದ ನಿಷೇದ ವಿಧಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಜಲಪಾತದಲ್ಲಿ ನೀರಿನ ಹಿರಿವು ಹೆಚ್ಚಾಗಿದ್ದು ವಿಷಕಾರಿ ಜಂತುಗಳು ನೀರಿನಲ್ಲಿ ಹರಿದು ಬರುತ್ತಿವೆ. ಮಳೆಯ ನಡುವೆಯೂ ಜಲಪಾತಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ಅವಘಡಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ನಿಷೇದ ಹೇರಲಾಗಿದೆ.
ವಲಯ ಅರಣ್ಯಾಧಿಕಾರಿ ಸುರೇಶ ನಾಯ್ಕ, ಉಪ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಜಿರಗಾಳೆ ಗ್ರಾಮ ಅರಣ್ಯ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಿಷೇದದ ಕುರಿತು ಮಾಹಿತಿ ಫಲಕವನ್ನು ಸ್ಥಳದಲ್ಲಿ ಅಳವಡಿಸಲಾಗಿದ್ದು ಕೆಲವು ದಿನಗಳ ಕಾಲ ಪ್ರವಾಸಿಗರು ವಿಭೂತಿ ಜಲಪಾತಕ್ಕೆ ಬರದಂತೆ ತಿಳಿಸಲಾಗಿದೆ.