ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಹಾಗೂ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪಟಾಕಿ ಅಂಗಡಿಯಲ್ಲಿ ಒಂದು ಸಾವಿರ ಕೆಜಿ ಪಟಾಕಿ ಸ್ಟಾಕ್ ಇಡಲು ಮಾತ್ರ ಅವಕಾಶ ನೀಡಲಾಗಿತ್ತು. ಪರವಾನಗಿ ನೀಡುವಾಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೇ ಮಾಡದೇ ಇದ್ದ ಕಾರಣ ಅವಗಢ ಸಂಭವಿಸಿದೆ. ಹೀಗಾಗಿ ನಾಲ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.