ಆಗಸ್ಟ್ 2: ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಹೈಕಮಾಂಡ್ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!