Monday, July 4, 2022

Latest Posts

ಅತ್ತ ಕೇಜ್ರಿವಾಲ್-ಭಗವಂತ್ ಮಾನ್ ಗುಜರಾತಿಗೆ…ಇತ್ತ 150 ಆಪ್ ಕಾರ್ಯಕರ್ತರು ಬಿಜೆಪಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಗುಜರಾತ್‌ಗೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಇತ್ತ ಆಪ್ ​ನ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿದ್ದರು. ಸ್ಥಳೀಯ ದೇವಸ್ಥಾನ, ಗಾಂಧಿ ಆಶ್ರಮಕ್ಕೆ ಭೇಟಿ ನೀಡಿ, ಸಭೆಗಳನ್ನು ನಡೆಸಿದ್ದರು. ಬಳಿಕ ಭಾನುವಾರ ಸಂಜೆ ಗುಜರಾತ್‌ನಿಂದ ಹಿಂತಿರುಗಿದ್ದಾರೆ.
ಅದರ ಬೆನ್ನಲ್ಲೇ ಸೋಮವಾರವೇ ಗಾಂಧಿನಗರದ ಕಮಲಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss