ಆಸಿಸ್ ನಾಯಕ ಪ್ಯಾಟ್ ಕಮಿನ್ಸ್ ತಾಯಿ ನಿಧನ, ಕಪ್ಪು ಪಟ್ಟಿ ಧರಿಸಿದ ತಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಾಯಿ ಇಂದು ನಿಧನರಾಗಿದ್ದಾರೆ.
ತಾಯಿಯ ಅನಾರೋಗ್ಯದ ಕಾರಣದಿಂದ ಭಾರತ ಪ್ರವಾಸವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದ ಪ್ಯಾಟ್ ತಾಯಿ ನಿಧನರಾಗಿದ್ದು, ಇಡೀ ತಂಡ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕೆ ಬಂದಿದೆ.

ದೀರ್ಘಕಾಲದಿಂದ ಅನಾರೋಗ್ಯದಿಂದ ಪ್ಯಾಟ್ ತಾಯಿ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಪ್ಯಾಟ್ ತಾಯಿ ಸ್ತನ ಕ್ಯಾನ್ಸರ್‌ಗೆ ತುತ್ತಾಗಿದ್ದರು. ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ವಾರದಿಂದ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ಯಾಟ್ ತಾಯಿಯ ಆರೈಕೆಗಾಗಿ ತೆರಳಿದ್ದರು.

ಪ್ಯಾಟ್ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಲು ಅಹಮದಾಬಾದ್‌ನಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದೆ. ಮರಿಯಾ ಕಮಿನ್ಸ್ ನಿಧನಕ್ಕೆ ನಾವು ಸಂತಾಪಸೂಚಿಸುತ್ತಿದ್ದೇವೆ. ಅವರ ಅಗಲಿಕೆ ನಮಗೆ ನೋವು ತಂದಿದೆ ಎಂದು ತಂಡ ಹೇಳಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!