ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಐಪಿಎಲ್​ನಲ್ಲಿ ಭಾಗಿಯಾಗಿದ್ದ ಆಸಿಸ್ ಆಟಗಾರರನ್ನು ಸ್ವದೇಶಕ್ಕೆ ಕಳುಹಿಸಲು ರೆಡಿಯಾಯಿತು ಹೊಸ ಪ್ಲಾನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಪಿಎಲ್ ಸರಣಿಯಲ್ಲಿ ಭಾಗಿಯಾಗಿದ್ದ ಆಟಗಾರರಿಗೆ ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣ ಈ ಬಾರಿಯ ಟೂರ್ನಿ ರದ್ಧಾಗಿದ್ದು, ಈ ಮಧ್ಯೆ ವಿದೇಶಿ ಆಟಗಾರರು ತಮ್ಮ ದೇಶಕ್ಕೆ ಮರಳುವುದು ಹೇಗೆ ಎಂದು ಪ್ರಶ್ನೆಗಳು ಮೂಡಿವೆ.
ಆಸ್ಟ್ರೇಲಿಯಾ ಮತ್ತು ಇತರ ಕೆಲ ದೇಶಗಳ ಆಟಗಾರರಿಗೆ ಸ್ವದೇಶಕ್ಕೆ ಮರಳುವುದು ಹೇಗೆ ಎಂಬ ವಿಚಾರ ಕಗ್ಗಂಟಾಗಿ ಉಳಿದಿದೆ. ಆಸ್ಟ್ರೇಲಿಯಾ ದೇಶವು ಭಾರತದಿಂದ ಮರಳುವ ಜನರಿಗೆ ನಿರ್ಬಂಧ ಹೇರಿದೆ. ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಹೋಕ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಐಪಿಎಲ್​ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದು ಈಗ ಇಲ್ಲಿ ಉಳಿದಿರುವ ಆಸ್ಟ್ರೇಲಿಯಾದ ಕ್ರಿಕೆಟ್ ಆಟಗಾರರು, ಸದ್ಯ ಭಾರತದ ಹೊರಗೆ ನಿಗದಿತ ದಿನಗಳ ಕಾಲ ತಂಗಬೇಕಾಗಿದೆ. ಸ್ವದೇಶಕ್ಕೆ ಮರಳಲು ಮೊದಲು ಭಾರತದಿಂದ ಹೊರಗೆ ಕೆಲದಿನಗಳ ಕಾಲ ಉಳಿಯಬೇಕಾಗಿದೆ. ಇದಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕೂಡ ಸಹಾಯ ಮಾಡಲಿದೆ.
ಬಿಸಿಸಿಐ, ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾಗವಹಿಸಿರುವ ಎಲ್ಲಾ ಆಸ್ಟ್ರೇಲಿಯಾ ಜನರನ್ನು ಮಾಲ್ಡೀವ್ಸ್ ಅಥವಾ ಶ್ರೀಲಂಕಾಗೆ ಕಳುಹಿಸಲಿದೆ. ಬಳಿಕ, ಅಲ್ಲಿಂದ ಆಸ್ಟ್ರೇಲಿಯಾಗೆ ಮರಳುವ ವ್ಯವಸ್ಥೆ ಮಾಡಲಾಗುವ ಬಗ್ಗೆ ಸ್ವತಃ ಕ್ರಿಕೆಟ್ ಆಸ್ಟ್ರೇಲಿಯಾದ ನಿಕ್ ಹೋಕ್ಲೆ ಬುಧವಾರ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ಕೆ ಬಿಸಿಸಿಐ ಸಹಕಾರ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ದೇಶದ ಆಟಗಾರರನ್ನು ಮರಳಿ ಕರೆಸಿಕೊಳ್ಳುವ ಬಗ್ಗೆ ಬಿಸಿಸಿಐ ಜೊತೆ ಸಂಪರ್ಕದಲ್ಲಿದ್ದೇವೆ. ಬಿಸಿಸಿಐ ಕೂಡ ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದೆ ಎಂದು ಸಿಡ್ನಿಯಲ್ಲಿ ಮಾತನಾಡಿದ ಹೋಕ್ಲೆ ತಿಳಿಸಿದ್ದಾರೆ.
ಶ್ರೀಲಂಕಾ ಅಥವಾ ಮಾಲ್ಡೀವ್ಸ್​ಗೆ ಆಟಗಾರರನ್ನು ಕಳುಹಿಸಲಾಗುವುದು. ಈ ಸಂಬಂಧ ಇನ್ನೆರಡು ದಿನದಲ್ಲಿ ಕೆಲಸವಾಗಲಿದೆ ಎಂದು ಅವರು ಹೇಳಿದ್ದಾರೆ. ಆಸ್ಟ್ರೇಲಿಯಾವು ಮೇ 15ರ ವರೆಗೆ ಭಾರತದಿಂದ ಆಗಮಿಸುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss