ಐರ್ಲೆಂಡ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ: ಸೆಮೀಸ್ ಕನಸು ಜೀವಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಸ್ಟ್ರೇಲಿಯಾ ವಿರುದ್ದ ಐರ್ಲೆಂಡ್ ತಂಡವು 42 ರನ್‌ಗಳ ಸೋಲು ಅನುಭವಿಸಿದೆ. ಆಸ್ಟ್ರೇಲಿಯಾ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡವು ಕೇವಲ 137 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಸೋಲನ್ನು ಅನುಭವಿಸಿದೆ. ಇದರಿಂದ ಐರ್ಲೆಂಡ್ ತಂಡದ ಸೆಮೀಸ್ ಕನಸು ಬಹುತೇಕ ಅಂತ್ಯವಾಗಿದೆ.

ಆಸ್ಟ್ರೇಲಿಯಾ ನೀಡಿದ್ದ 180 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಐರ್ಲೆಂಡ್ , ಕಾಂಗರೂಗಳ ಪಡೆಯ ಬೌಲಿಂಗ್ ದಾಳಿಗೆ ಆರಂಭದಲ್ಲೇ ಎಡವಿದ್ದು,25 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.

25 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಸೋಲಿನತ್ತ ಮುಖಮಾಡಿದ್ದ ಐರ್ಲೆಂಡ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸುವಂತ ಆಟ ಆಡುವಲ್ಲಿ ಲಾರ್ಕನ್ ಟಕ್ಕರ್ ಯಶಸ್ವಿಯಾದರು. ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದಾಗ, ಲಾರ್ಕನ್ ಟಕ್ಕರ್, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಲಾರಂಭಿಸಿದರು. 48 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 71 ರನ್ ಸಿಡಿಸಿದರಾದರೂ, ಆದರೆ ಮತ್ತೊಂದು ತುದಿಯಲ್ಲಿವಿಕೆಟ್ ಬೀಳುಲುತ್ತಿದ್ದವು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!