Thursday, March 30, 2023

Latest Posts

ಟೀಮ್ ಇಂಡಿಯಾ ವಿರುದ್ಧ ವಿಕೆಟ್ ನಷ್ಟವಿಲ್ಲದೆ ಗೆದ್ದ ಸಂಭ್ರಮಿಸಿದ ಆಸ್ಟ್ರೇಲಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನಿಷ್ಠ ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ ವಿರುದ್ಧ ಕೇವಲ 11 ಓವರ್‌ಗಳಲ್ಲಿ ಆಸ್ಟ್ರೇಲಿಯಾ ಸುಲಭ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ.

118 ರನ್ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ, ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಶ್ ಜೊತೆಯಾಟದಲ್ಲಿ ಗೆಲುವಿನ ನಗೆ ಬೀರಿತು.
ಮಿಚೆಲ್ ಮಾರ್ಶ್ ಕೇವಲ 28 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಇತ್ತ ಟ್ರಾವಿಸ್ ಹೆಡ್ ಕೂಡ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.

ಮಿಚೆಲ್ ಮಾರ್ಶ್ ಅಜೇಯ ರನ್ ಸಿಡಿಸಿದರೆ, ಟ್ರಾವಿಸ್ ಹೆಡ್ ಅಜೇಯ ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಪಂದ್ಯ ಗೆದ್ದುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ 26 ಓವರ್‌ಗಳಲ್ಲಿ 117 ರನ್ ಸಿಡಿಸಿ ಆಲೌಟ್ ಆಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!