ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಆಸ್ಟ್ರೇಲಿಯಾ ತಂಡ ತನ್ನ ಅಜೇಯ ಆಟದ ಮೂಲಕ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮುಗ್ಗರಿಸಿದ ಭಾರತ ತಂಡ ಅಂಕಪಟ್ಟಿಯಲ್ಲಿ ಭಾರೀ ಕುಸಿತ ಕಂಡಿದೆ.
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವ ಆಸ್ಟ್ರೇಲಿಯಾ, ಸದ್ಯ ಅಜೇಯವಾಗಿ ಉಳಿದಿದೆ. ಆಡಿರುವ 6 ಪಂದ್ಯಗಳಲ್ಲಿ ಆರರಲ್ಲೂ ಜಯಭೇರಿ ಬಾರಿಸಿರುವ ಪ್ಯಾಟ್ ಕಮಿನ್ಸ್ ಪಡೆ, 100% ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಮತ್ತೊಂದೆಡೆ, ಸೌತ್ ಆಫ್ರಿಕಾ ವಿರುದ್ಧ 2-0 ಅಂತರದಿಂದ ಸೋತ ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಈ ಸೋಲಿನಿಂದಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕಿಂತಲೂ ಕೆಳಕ್ಕೆ ಅಂದರೆ 6ನೇ ಸ್ಥಾನಕ್ಕೆ ಕುಸಿದಿದೆ. ಭಾರತ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲು ಕಂಡಿದ್ದು, 48.15% ಅಂಕಗಳನ್ನು ಹೊಂದಿದೆ.

